ಗೋಕಾಕ– ನಮ್ಮ ರಾಷ್ಟ್ರದ ಬೆಳವಣಿಗೆಯಲ್ಲಿ ಸಂವಿಧಾನ ಶಿಲ್ಪಿ, ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಪಾತ್ರ ಗಣನೀಯ ಎಂದು ಅರಭಾವಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು.
ಇಲ್ಲಿಯ ಎನ್ಎಸ್ಎಫ್ ಕಾರ್ಯಾಲಯದಲ್ಲಿ ಭಾರತರತ್ನ ಡಾ. ಬಿ.ಆರ್.‌ಅಂಬೇಡ್ಕರ್ ಅವರ 131 ನೇ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಂಬೇಡ್ಕರ್ ಅವರು ಈ ರಾಷ್ಟ್ರದ ಧೀಮಂತ ವ್ಯಕ್ತಿಯಾಗಿದ್ದರು ಎಂದು ಅವರು ಬಣ್ಣಿಸಿದರು.
ಭಾರತವು ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಲು ಅವರ ಕೊಡುಗೆ ಅಪಾರವಾಗಿದೆ. ಸಂವಿಧಾನವನ್ನು ರಚಿಸಿ, ನಮ್ಮ ಮೂಲಭೂತ ಹಕ್ಕುಗಳನ್ನು ಪಡೆಯಲು ಭದ್ರಬುನಾದಿ ಹಾಕಿದ್ದಾರೆ. ಅಂಬೇಡ್ಕರ್ ಅವರ ಆದರ್ಶ, ತತ್ವಗಳು ಇಂದಿಗೂ ಪ್ರಸ್ತುತವಾಗಿವೆ. ದಲಿತ ಸಮುದಾಯದವರಿಗೆ ಅಷ್ಟೇ ಸಿಮೀತವಾಗದೇ ಎಲ್ಲ ವರ್ಗಗಳ ಪ್ರೀತಿಗೆ ಪಾತ್ರರಾಗಿದ್ದಾರೆ. ಭಾರತಕ್ಕೆ ಸಂವಿಧಾನದ ದೊಡ್ಡ ಕೊಡುಗೆ ನೀಡಿರುವ ಅಂಬೇಡ್ಕರ್ ಅವರನ್ನೇ ಆಗಿನ ಕಾಂಗ್ರೆಸ್ ಸರ್ಕಾರವು ಸೋಲಿಸಿತು. ಇದು ವಿಪರ್ಯಾಸದ ಸಂಗತಿ ಎಂದರು.
ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಡಾ. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆಯನ್ನು ಸಲ್ಲಿಸಿದರು.
ಅರಭಾವಿ ಮಂಡಲ ಬಿಜೆಪಿ ಅಧ್ಯಕ್ಷ ಮಹಾದೇವ ಶೆಕ್ಕಿ,
ಪ್ರಭಾ ಶುಗರ್ಸ್ ಅಧ್ಯಕ್ಷ ಶಿದ್ದಲಿಂಗಪ್ಪ ಕಂಬಳಿ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರಮೋದ ನುಗ್ಗಾನಟ್ಟಿ, ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಸಂಜಯ ಹೊಸಮನಿ, ತಾ.ಪಂ.ಮಾಜಿ ಸದಸ್ಯರಾದ ನಾಗಪ್ಪ ಮಂಗಿ, ಸುಭಾಸ ಕಮತಿ, ವಿಠ್ಠಲ ಆಡಿನ, ಸಿದ್ದು ಕಂಕಣವಾಡಿ, ಬಿಜೆಪಿ ಪದಾಧಿಕಾರಿಗಳು, ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 9742418836 ಎಂ ಬಿ ಭರಮಣ್ಣವರ್ ಸಂಪಾದಕರು