ಗಂಗಾವತಿ. 15 ಇಲ್ಲಿನ ಶ್ರೀ ವಿದ್ಯಾನಿಕೇತನ ಸಮೂಹ ಶಿಕ್ಷಣ ಸಂಸ್ಥೆಯ ಶ್ರೀರಾಮನಗರ, ಗಂಗಾವತಿ ಹಾಗೂ ವಡ್ಡರಹಟ್ಟಿ ಪಿಯು ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅದ್ಭುತ ಸಾಧನೆ ಮಾಡುವ ಮೂಲಕ ಇಡೀ ಉತ್ತರ ಕರ್ನಾಟಕವೇ ಹೆಮ್ಮೆ ಪಡುವಂತೆ ಮಾಡಿದ್ದಾರೆ ಎಂದು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ನೆಕ್ಕಂಟಿ ಸೂರಿಬಾಬು ತಿಳಿಸಿದರು.

ವಡ್ಡರಹಟ್ಟಿಯ ಕಾಲೇಜು ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಫಲಿತಾಂಶದ ಪಟ್ಟಿಯನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು,

ಸಂಸ್ಥೆಯ ಒಟ್ಟು ಮೂರು ಕಾಲೇಜುಗಳಿಂದ 1,662 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅದರಲ್ಲಿ 1,391 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ (ಉನ್ನತ ಶ್ರೇಣಿ) ಪಡೆಯುವ ಮೂಲಕ ದಾಖಲೆ ಬರೆದಿದ್ದಾರೆ.

ಯು.ಶ್ರಾವಣಿ: ವಿಜ್ಞಾನ ವಿಭಾಗದಲ್ಲಿ 598 ಅಂಕಗಳನ್ನು ಪಡೆಯುವ ಮೂಲಕ ಉತ್ತರ ಕರ್ನಾಟಕವು ಶಿಕ್ಷಣ ಕ್ಷೇತ್ರದಲ್ಲಿ ಹಿಂದುಳಿದಿಲ್ಲ ಎಂಬುದನ್ನು ಸಾಬೀತುಪಡಿಸಿದ್ದಾರೆ. ಕೇವಲ 2 ಅಂಕಗಳ ಅಂತರದಿಂದ ರಾಜ್ಯಕ್ಕೆ ಪ್ರಥಮಸ್ಥಾನ ಗಳಿಸುವ ಅವಕಾಶವನ್ನು ಕೈತಪ್ಪಿಸಿಕೊಂಡಿದ್ದಾರೆ.

ಅರ್ಜುನ್: 597, ವಿ.ಅಶ್ವಿನಿ: 595 ಅಂಕಗಳನ್ನು ಪಡೆದುದ್ದು, ಇವರೊಂದಿಗೆ 36 ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳನ್ನು ಗಳಿಸಿದ್ದಾರೆ. ಒಟ್ಟಾರೆ 261 ವಿದ್ಯಾರ್ಥಿಗಳು ಪ್ರಥಮ ಸ್ಥಾನ ಹಾಗೂ ಐವರು ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದಿದ್ದಾರೆ. ವಿದ್ಯಾರ್ಥಿಗಳ ಈ ಅಮೋಘ ಸಾಧನೆಯ ಹಿಂದೆ ಪ್ರಾಚಾರ್ಯರ ಮತ್ತು ಉಪನ್ಯಾಸಕರ ಅವಿರತ ಶ್ರಮ ಹಾಗೂ ಮಾರ್ಗದರ್ಶನವಿದೆ, ಎಂದು ನೆಕ್ಕಂಟಿ ಸೂರಿಬಾಬು ಎಂದರು.
2026-27ನೇ ಸಾಲಿಗೆ ರಾಜ್ಯ ಮಟ್ಟದ ಸಂಕಲ್ಪ:
ಮುಂದಿನ ಶೈಕ್ಷಣಿಕ ವರ್ಷದಲ್ಲಿ ರಾಜ್ಯಮಟ್ಟದ ರ್ಯಾಂಕ್ ಪಟ್ಟಿಯಲ್ಲಿ ತಮ್ಮ ಸಂಸ್ಥೆಯ ವಿದ್ಯಾರ್ಥಿಗಳು ಅಗ್ರಸ್ಥಾನ ಪಡೆಯುವಂತೆ ಮಾಡುವಲ್ಲಿ ಯಾವುದೇ ಸಂದೇಹವಿಲ್ಲ ಎಂಬ ದೃಢ ನಿರ್ಧಾರವನ್ನು ಇದೇ ಸಂದರ್ಭದಲ್ಲಿ ಅವರು ವ್ಯಕ್ತಪಡಿಸಿದರು.

ತಂತ್ರಜ್ಞಾನ ಆಧಾರಿತ ಕಲಿಕೆಗೆ ‘ನೂತನ ಪ್’
ಬಿಡುಗಡೆ:ಬೋಧನಾ ಪ್ರಕ್ರಿಯೆಯನ್ನು ಮತ್ತಷ್ಟು ಬಲಪಡಿಸಲು ಪ್ರಸಕ್ತ ವರ್ಷದಿಂದ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರಿಗಾಗಿ ನೂತನ ಆ್ಯಪ್ ಒಂದನ್ನು ಬಿಡುಗಡೆಗೊಳಿಸಲಾಗಿದೆ ವಿದ್ಯಾರ್ಥಿಗಳು ಅಂಕಗಳನ್ನು ಕಳೆದುಕೊಳ್ಳುತ್ತಿರುವ ಅಂಶಗಳನ್ನು ಪತ್ತೆ ಹಚ್ಚುವುದು ಈ ಆ್ಯಪ್ ನ ಉದ್ದೇಶವಾಗಿದೆ.

ಬೋಧನಾ ಚಟುವಟಿಕೆಗಳ ನೀತಿ ನಿಯಮಗಳು, ಮೌಲ್ಯಮಾಪನ ದೃಢೀಕರಣ ಹಾಗೂ ವಿದ್ಯಾರ್ಥಿಗಳಿಗೆ ಅಗತ್ಯವಿರುವಸಮಗ್ರ ಮಾಹಿತಿ ಈ ಪ್ ಮೂಲಕ ಲಭ್ಯವಾಗಲಿದೆ ಎಂದು ತಿಳಿಸಿದರು.

ಈ ಪತ್ರಿಕಾಗೋಷ್ಠಿಯಲ್ಲಿ ಸಂಸ್ಥೆಯ ಉಪಾಧ್ಯಕ್ಷ ಮಲ್ಲಿಕಾರ್ಜುನ ಶ್ರೀರಾಮನಗರ, ಆದರ್ಶ ನೆಕ್ಕಂಟಿ, ಪ್ರಾಚಾರ್ಯರಾದ ಜಗನ್, ಉಮಾಶಂಕ‌ರ್, ಅಭಿಷೇಕ, ನಳಿನಿ ಸೇರಿದಂತೆ ಇತರರು ಇದ್ದರು

Leave a Reply

Your email address will not be published. Required fields are marked *

ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 9742418836 ಎಂ ಬಿ ಭರಮಣ್ಣವರ್ ಸಂಪಾದಕರು